Tuesday, January 7, 2020

ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22 ಕ್ಕೆ ನೇಣುಗಂಭ ಫಿಕ್ಸ್...

ಸತತ 7 ವರ್ಷಗಳ ಕಾನೂನು ಹೋರಾಟದ ಬಳಿಕ ನಿರ್ಭಯಾ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯ ದಿನಾಂಕ ಪ್ರಕಟವಾಗಿದೆ.
2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಪೂರ್ಣ ಪ್ರಮಾಣದ ತೀರ್ಪು ಇಂದು ಹೊರಬಿದ್ದಿದ್ದು  ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ  ದೆಹಲಿಯ ಪಟಿಯಾಲ ಹೌಸ್‌ ಕೋರ್ಟ್‌ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲುಶಿಕ್ಷೆ  ವಿಧಿಸಿ ತೀರ್ಪು ನೀಡಿದೆ. ನ್ಯಾ. ಸತೀಶ್‌ ಕುಮಾರ್‌ ಅರೋರಾ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.ಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಪರಾಧಿಗಳ ಪರ ವಕೀಲ ಎ.ಪಿ. ಸಿಂಗ್‌, ಒಂದೆರಡು ದಿನಗಳಲ್ಲಿ ಕ್ಯುರೇಟಿವ್‌ ಅರ್ಜಿ ದಾಖಲಿಸುವುದಾಗಿ ಹೇಳಿಕೊಂಡಿದ್ದಾರೆ.
ಸದ್ಯ ನ್ಯಾಯಾಲಯದ ಆದೇಶಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ಪಾಲಕರು, ಈ ತೀರ್ಪಿನಿಂದಾಗಿ ನನ್ನ ಮಗಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ನನ್ನ ಮಗಳಿಗೆ ಮಾತ್ರವಲ್ಲ ದೇಶದ ಪ್ರತಿಯೊಬ್ಬ ಮಹಿಳೆಯರಿಗೂ ಇಂದು ನ್ಯಾಯ ಸಿಕ್ಕಿದಂತಾಗಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ ನೀಡಿದ ಡೆತ್ ವಾರೆಂಟ್ ನಿಂದ ಜನಕ್ಕೆ ನ್ಯಾಯಾಂಗದ ವ್ಯವಸ್ಥೆಯ ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಕಣ್ಣೀರಿಟ್ಟರು.
ಏನೇ ಆದರೂ ಒಂದು ತೀರ್ಪು ಬರಲು 7 ವರ್ಷ ಕಾಯಬೇಕು ಎಂದರೆ ಹೇಗೆ? ಮುಂದಿನ ದಿನಗಳಲ್ಲಿ ಭಾರತದ ಕಾನೂನು ವ್ಯವತ್ತೆ ಮತ್ತಷ್ಟು ಚುರುಕಾಗಬೇಕು ಎಂಬುವುದೇ ನಮ್ಮ ಆಶಯ.

0 Comments:

Post a Comment

Subscribe to Post Comments [Atom]

<< Home