Tuesday, January 7, 2020

ನಾಳೆ ಭಾರತ್ ಬಂದ್!!! ಬೇಡಿಕೆ ಏನು?

 ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಲು ನಾಳೆ ದೇಶವ್ಯಾಪಿ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನ ಕೆಲ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ಸಿಐಟಿಯೂ ಸೇರಿ ವಿವಿಧ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ್ದು ಇದರಿಂದ ನಾಳೆ ಬೆಳಗ್ಗೆ 6ರಿಂದ ಸಂಜೆ 6ರ ತನಕ ನಗರದ ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟಲಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ.
 ಈ ಪ್ರತಿಭಟನೆಗೆ ಕಾರಣ ಏನು ಎಂಬುವುದನ್ನು ತಿಳಿಯುದಾದರೆ...
1. ಒಟ್ಟು ರಾಷ್ಟ್ರೀಯ ಉತ್ಪನ್ನ ಜಿಡಿಪಿ ಶೇ.9.4 ರಿಂದ 4.5ಕ್ಕೆ ಕುಸಿತ.
2. ಆರ್ಥಿಕ ಬಿಕ್ಕಟ್ಟಿನಿಂದ ಉದ್ಯೋಗ ಕಳೆದುಕೊಂಡವರ ಸಂಖ್ಯೆ 50 ಲಕ್ಷ ಮಂದಿ.
3. ಎಂಜಿನಿಯರಿಂಗ್ ಮುಗಿಸಿದ 100 ಮಂದಿಯಲ್ಲಿ 12 ಜನರಿಗೆ ಮಾತ್ರ ಉದ್ಯೋಗ.
4. ಮಾಲೀಕರ ಲಾಭದ ಪಾಲು 100ರಲ್ಲಿ 45 ರೂ. ಕಾರ್ಮಿಕರ ವೇತದ ಪಾಲು 100 ರಲ್ಲಿ 15 ರೂ.
5. ಜಿಎಸ್‍ಟಿಯಿಂದ ಎಲ್ಲ ಬೆಲೆಗಳು ಶೇ.20 ರಷ್ಟು ಏರಿಕೆ.
6. ಕಾರ್ಮಿಕರು ಪ್ರತಿಭಟನೆ ಮಾಡಿದರೆ 6 ತಿಂಗಳು ಜೈಲು ಶಿಕ್ಷೆ.
7. ಶ್ರೀಮಂತ ಉದ್ಯಮಿಗಳು ಮಾಡಿರುವ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ಇರಲು ಕಾನೂನು ತರಲಾಗಿದೆ.

ಬೇಡಿಕೆ ಏನು?
1. 21 ಸಾವಿರ ರೂಪಾಯಿ ರಾಷ್ಟ್ರವ್ಯಾಪಿ ಸಮಾನ ಕನಿಷ್ಟ ವೇತನಕ್ಕೆ ಆಗ್ರಹ.
2. ಕೇಂದ್ರ ಸರ್ಕಾರ ದ ಖಾಸಗೀಕರಣ ನೀತಿಗೆ ವಿರೋಧ.
3. ಕಾರ್ಮಿಕ ಕಾನೂನು ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಗಳಲಿ ಕಾರ್ಮಿಕ ನ್ಯಾಯಾಲಯ ಸ್ಥಾಪನೆ.
4. ಮಾಸಿಕ ಪಿಂಚಣಿ 10 ಸಾವಿರ ರೂಪಾಯಿಗಾಗಿ ಬೇಡಿಕೆ.
5. ಬೆಲೆಯೇರಿಕೆ ನಿಯಂತ್ರಣಕ್ಕೆ ಆಗ್ರಹಿಸಿ, ಸಾರ್ವತ್ರಿಕಪಡಿತರ ವ್ಯವಸ್ಥೆಗಾಗಿ.
6. ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿರುವ ನೀತಿಗಳ ವಿರುದ್ಧ ಉದ್ಯೋಗ ಕಳಕೊಂಡ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ ಮಾಡಬೇಕು.
7. ಕಟ್ಟಡ ಕಾರ್ಮಿಕರು, ಆಟೋ ಚಾಲಕರು, ಬೀದಿಬದಿಯ ವ್ಯಾಪಾರಸ್ಥರು, ಮನೆ ಕೆಲಸಗಾರರು, ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ಸ್ಥಾಪನೆ, ಕಲ್ಯಾಣ ಯೋಜನೆಗೆ ಅನುದಾನ ನೀಡಬೇಕು.
8. ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಗಳಿಗಾಗಿ ಡಾ| ಸ್ವಾಮಿನಾಥನ್ ವರದಿ ಜಾರಿಗಾಗಿ, ಸಾಲ ಮನ್ನಾಕ್ಕಾಗಿ, ರೈತರ ಆತ್ಮಹತ್ಯೆ ತಡೆಗಾಗಿ, ಗ್ರಾಮೀಣ ಉದ್ಯೋಗ ಖಾತ್ರಿ ಬಲಪಡಿಸಲು ಆಗ್ರಹ.
9. ಗುತ್ತಿಗೆ ಪದ್ಧತಿ ನಿಯಂತ್ರಣ, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾಯಂ ಖಾತ್ರಿಗೆ ಆಗ್ರಹ.
11. ರಕ್ಷಣಾ ವಲಯ, ರೈಲ್ವೇ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡಬಾರದು
ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ನಾಳೆ ಭಾರತ್ ಬಂದ್ ಆಗಲಿದ್ದು ಎಷ್ಟರ ಮಟ್ಟಿಗೆ ಯಶಸ್ವಿ ಆಗಲಿದೆ ಎಂಬುವುದು ಕಾದು ನೋಡಬೇಕಾಗಿದೆ.

0 Comments:

Post a Comment

Subscribe to Post Comments [Atom]

<< Home