ಅಂಡರ್ 19 ವಿಶ್ವಕಪ್ ಕ್ರಿಕೆಟ್ : ಫೈನಲ್ ನಲ್ಲಿ ಹಾಲಿ ಚಾಂಪಿಯನ್ ಭಾರತದ ಜೊತೆ ಸೆಣೆಸಲಿರುವ ಬಾಂಗ್ಲಾ.................
ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಅದಾಗಲೇ ಫೈನಲ್ ಪ್ರವೇಶಿಸಿದ್ದು ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಬೀಗಿರುವ ಬಾಂಗ್ಲಾದೇಶ ಭಾರತದ ಜೊತೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಫೆಬ್ರವರಿ 9 ರಂದು ಪೊಚೆಫ್‌ಸ್ಟ್ರೂಮ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 211 ರನ್ ಪೇರಿಸಿತ್ತು. 212 ರನ್ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಇನ್ನು 35 ಎಸೆತಗಳು ಬಾಕಿ ಇರುವಂತೆ ಬಾಂಗ್ಲಾ ಗೆಲುವಿನ ನಗೆ ಬೀರಿತು.ಈ ಮೂಲಕ ಬಾಂಗ್ಲಾದೇಶ ಮೊದಲ ಬಾರಿಗೆ ಫೈನಲ್ ಪ್ರವೇಸಿಶಿದ್ದು ಹಾಲಿ ಚಾಂಪಿಯನ್ ಬಲಿಷ್ಠ ಭಾರತ ತಂಡವನ್ನು ಎದುರಿಸಲಿದೆ.


0 Comments:
Post a Comment
Subscribe to Post Comments [Atom]
<< Home