ಖಾಸಗಿ ಬಸ್ ಚಾಲಕ ಆತ್ಮಹತ್ಯೆಗೆ ಶರಣು!
ಕಳಸ: ಕಳೆದ ಹಲವು ವರ್ಷಗಳಿಂದ ಕಳಸದ ಪ್ರತಿಷ್ಠಿತ ಕೆಕೆಬಿ ಬಸ್ ನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರೇಬೈಲ್ ಸಮೀಪದ ಬೂದಿಗುಂಡಿ ನಿವಾಸಿ ಭಾಸ್ಕರ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿದ್ದ ಕಳೆನಾಶಕ ಸೇವಿಸಿದ್ದು,ತಕ್ಷಣ ಅವರನ್ನು ಕಳಸದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲೇ ಭಾಸ್ಕರ್ ಅವರು ಅಸುನೀಗಿದ್ದಾರೆ. ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments:
Post a Comment
Subscribe to Post Comments [Atom]
<< Home