Sunday, August 30, 2020

ಕಬ್ಬಿಗರಹಳ್ಳಿ-ದೇವಗೊಂಡನಹಳ್ಳಿ ಸೇತುವೆಗೆ 1.50 ಕೋಟಿ ಅನುದಾನ - ಸಿ.ಟಿ.ರವಿ


 ಚಿಕ್ಕಮಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಬ್ಬಿಗರಹಳ್ಳಿ-ದೇವಗೊಂಡನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ರೂ.1.50 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಹೇಳಿದರು.

ಅವರು ಇಂದು ಚಿಕ್ಕಮಗಳೂರು ತಾಲ್ಲೂಕಿನ ಕಬ್ಬಿಗರಹಳ್ಳಿ ಗ್ರಾಮದಲ್ಲಿ ಕಬ್ಬಿಗರಹಳ್ಳಿ-ದೇವಗೊಂಡನಹಳ್ಳಿ ಸಂಪರ್ಕ ಕಲ್ಪಿಸುವ ರೂ.1.50 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ ಪ್ರತಿ ಗ್ರಾಮಗಳ ಸರ್ವಾಂಗಿಣ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಅದರಂತೆ ಕೋವಿಡ್-19 ಆರ್ಥಿಕ ಸಂಕಷ್ಟದ ನಡುವೆಯೂ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ರಸ್ತೆ, ಮನೆ, ಸೇತುವೆ ಒಳಗೊಂಡಂತೆ ಹಲವು ಅಭಿವೃದ್ಧಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ ಇಂದು ಕಬ್ಬಿಗರಹಳ್ಳಿ ಗ್ರಾಮದ ಜನರ ಮನವಿಯಂತೆ ಈ ಭಾಗದ ರಸ್ತೆ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ರೂ. 1.50 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ  ತಾಲ್ಲೂಕು ಪಂಚಯಿತಿ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಎಇಇ ಗವಿರಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ತೋಟಪ್ಪ, ಚಂದ್ರಮ್ಮ, ಚಂದ್ರಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಉಪಸ್ಥಿತರಿದ್ದರು. 

0 Comments:

Post a Comment

Subscribe to Post Comments [Atom]

<< Home