ಅಧಿಕಾರಕ್ಕಿಂತ ಜನಸೇವೆಗೆ ಬಿಜೆಪಿ ಆದ್ಯತೆ - ಸಿ.ಟಿ ರವಿ
ಬಿಜೆಪಿ ಪಕ್ಷ ಅಧಿಕಾರಕ್ಕಿಂತ ಸಾಮಾನ್ಯ ಜನರ ಸಂಕಷ್ಟದಲ್ಲಿ ಭಾಗಿಯಾಗುವುದು ಮತ್ತು ಅವರನ್ನು ಸದಾ ನೆಮ್ಮದಿಯಾಗಿ ಇಡುವುದೇ ಬಿಜೆಪಿ ಪಕ್ಷದ ಗುರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ಸೋಮವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕರಣಿಗೆ ಸಭೆಯಲ್ಲಿ ಮಾತನಾಡಿದ ಅವರು ವಾಜಪೇಯಿ ಅವರು ಯಾವತ್ತೂ ಕುರ್ಚಿಗಾಗಿ ಹಂಬಲಿಸಿದವರಲ್ಲ ಅವರಂತಹ ಮಹಾನ್ ನಾಯಕರು ಇರುವ ಪಕ್ಷದಲ್ಲಿ ನಾವಿದ್ದೇವೆ. ಬಿಜೆಪಿಗೆ ತನ್ನದೇ ಆದ ಸಿದ್ದಂತವಿದೆ ಆ ಸಿದ್ದಂತವನ್ನು ನಾವು ಪಾಲಿಸಬೇಕು ಎಂದು ಯುವಮೋರ್ಚಾ ಪದಾಧಿಕಾರಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ಉಪಸ್ಥಿತರಿದ್ದ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶರಾಯರು ಮಾತನಾಡಿ ಜವಾಬ್ದಾರಿ ಹೊಂದಿರುವ ಪ್ರತಿಯೊಬ್ಬರು ಪಕ್ಷ ಕಟ್ಟುವ ಕೆಲಸದಲ್ಲಿ ಭಾಗಿಯಗಬೇಕು ಜೊತೆಗೆ ಪಕ್ಷವೇ ತಮ್ಮ ಕೆಲಸವನ್ನು ನೋಡಿ ಜವಾಬ್ದಾರಿ ಕೊಡಬೇಕು ಆ ರೀತಿಯಾಗಿ ಪಕ್ಷ ಸಂಘಟನೆಯಲ್ಲಿ ಭಾಗಿಯಾಗಬೇಕೆಂದು ಯುವ ಪದಾಧಿಕಾರಿಗಳಿಗೆ ತಿಳಿಸಿದರು.
ಹಾಗೆ ಸಭೆಯಲ್ಲಿ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಅಜಿತ್ ಹೆಗ್ಡೆ ಮತ್ತು ರಾಜ್ಯ ಉಪಾಧ್ಯಕ್ಷರಾದ ಹರ್ಷಿತ ವೆಂಕಟೇಶ್ ಮಂಡಲ ಕಾರ್ಯ ಚಟುವಟಿಕೆಗಳ ಬಗ್ಗೆ ವರದಿಯನ್ನು ಪರಿಶೀಲಿಸಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಲ್ಮುರುಡಪ್ಪ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಅರವಿಂದ್ ರೆಡ್ಡಿ, ನಿಕಟಪೂರ್ವ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪುಣ್ಯ ಪಾಲ್, ಯುವ ಮೋರ್ಚಾ ಜಿಲ್ಲಾ ಪ್ರಭಾರಿ ರವಿ,ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಗನ್, ಸಂತೋಷ್ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಕಾಂಚನ್ ಹಾಗೂ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಇನ್ನಿತರ ಪದಾಧಿಕಾರಿಗಳು ಹಾಜರಿದ್ದರು.

